ಮಂಗಳೂರು: ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಗುರುತಿನ ಚೀಟಿ (ಎಪಿಕ್)ಗೆ ಆಧಾರ್ ಲಿಂಕ್ ಮಾಡುವ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಇಲಾಖೆಗಳು ಕೂಡಲೇ ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದರು. ಬುಧವಾರ ಈ ಕುರಿತು ಹಮ್ಮಿಕೊಂಡಿದ್ದ ಸಭೆ ಹಾಗೂ ವಿಡಿಯೋ...
ಇದೇ ಆ.20ರ ಶನಿವಾರ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದ್ದು, ಹಿರಿಯ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ವಿವರ ಇಂತಿದೆ: ಮಂಗಳೂರು ತಾಲೂಕಿನ ಮಲ್ಲೂರು, ಮಂಜನಾಡಿ, ಆದ್ಯಪಾಡಿ, ಬಾಳ, ಕೊಳಂಬೆ. ಮುಲ್ಕಿ ತಾಲೂಕಿನ ಹತ್ತನೆ ತೋಕುರು. ಮೂಡಬಿದ್ರೆ ತಾಲೂಕಿನ ಇರುವೈಲ್...
ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ವಿದೇಶಿ ಕರೆನ್ಸಿಗಳನ್ನು ಮಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಸರಗೋಡಿನ ಇಬ್ಬರು ವ್ಯಕ್ತಿಗಳು 20,71,158 ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಪಾಸಣೆಯ ವೇಳೆ ಪತ್ತೆ ಹಚ್ಚಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿ...
ಮಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನಿರ್ವಹಣಾ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಎಲೆಕ್ಟ್ರಿಷಿಯನ್ ಹುದ್ದೆಗೆ ಡಿಪ್ಲೋಮಾ ಅಥವಾ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಇ. ಶಿಕ್ಷಣ ಪೂರೈಸಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸ್ವ ವಿವರ, ವಿದ್ಯಾರ್ಹತೆಯ ...
ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಲ್ಲಿ ದೇಶಾದ್ಯಂತ ಆಯ್ಕೆ ಮಾಡಲಾಗಿದ್ದ 75 ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಟಾಪ್-12ನೇ ಸ್ಥಾನ ಗಳಿಸಿದೆ. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಸಂಘಟಿತ ವಲಯದ ಕಾರ್ಮಿಕರನ್ನು ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಡಿ ನೋಂದಾಯಿಸಲು ಕೇಂದ್ರ ಸರ್ಕಾರ ದೇಶದ 75 ಜಿಲ್ಲೆಗಳನ್ನು ಆಯ್ಕೆ ...
ಮಗು ಹಠ ಮಾಡುತ್ತಿದೆ ಎಂದು ಕೋಪಗೊಂಡ ತಾಯಿಯೋರ್ವಳು ಮಗುವಿಗೆ ಕಾದ ಸಟ್ಟುಗದಿಂದ ಬರೆ ಹಾಕಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಾವೂರಿನಲ್ಲಿ ನಡೆದಿದೆ. ನಾಲ್ಕು ವರ್ಷ ಐದು ತಿಂಗಳು ಪ್ರಾಯದ ಹೆಣ್ಣು ಮಗುವಿಗೆ ಸುಳ್ಯದ ಗಾಂಧಿನಗರ ನಾವೂರು ನಿವಾಸಿಯಾದ ಕಾವ್ಯಶ್ರೀ ಎಂಬ ಮಹಿಳೆ ಸಟ್ಟುಗದಿಂದ ಬರೆ ಎಳೆದಿದ್ದಾಳೆ. ಈಕೆ ಮೊದಲ ಗಂಡ...
ಸುರತ್ಕಲ್: ಮಂಗಳೂರಿನ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಹರ್ಷಿತ್ (28) ಎಂದು ಗುರುತಿಸಲಾಗಿದೆ. ಈತ ಆರೋಪಿಗಳು ಕೃತ್ಯ ನಡೆಸಿದ ಬಳಿಕ ಅವರನ್ನು ಇನ್ನೊಂದು ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಆಶ್ರಯ...
ಮಂಗಳೂರು: ಆಗಸ್ಟ್ 20ರಂದು ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆಯನ್ನು ಈ ಬಾರಿ ಹಿಂದುಳಿದ ವರ್ಗಗಳ ದಿನಾಚರಣೆ ಎಂದು ಆಚರಿಸಿ ಜಿಲ್ಲಾ ಮಟ್ಟದಲ್ಲಿಯೂ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ...
ಮಂಗಳೂರು: ಮುಸಲ್ಮಾನರ ಏರಿಯಾಗಳಲ್ಲಿ ಸಾವರ್ಕರ್ ಚಿತ್ರ ಯಾಕೆ ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಶಾಸಕ ವೇದವ್ಯಾಸ ಕಾಮತ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ಧರಾಮಯ್ಯನವರೇ ಮುಸಲ್ಮಾರ ಏರಿಯಾಗಳು ಪಾಕಿಸ್ತಾನದಲ್ಲಿವೆಯಾ..? ಭಾರತದಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಭಾವಚಿತ್ರ ಬಳಸುವುದಕ್ಕೆ ಸಿದ್ಧರಾಮಯ್ಯ ಅಥವಾ ಕಾಂಗ್ರೇಸಿಗರ ಅನುಮತಿ ಬ...
ಬೆಳ್ತಂಗಡಿ: ಬಸ್ ನಿರ್ವಾಹಕನೋರ್ವ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿ ರೆಖ್ಯ ಗ್ರಾಮದ ನಿವಾಸಿ ಮಂಜುನಾಥ ರೈ(50) ಎಂಬವರಾಗಿದ್ದಾರೆ. ಮೂಡಬಿದ್ರೆ-ಬೆಂಗಳೂರು ಬಸ್ಸನಲ್ಲಿ ಕಂಡಕ್ಟರ್ ಆಗಿರುವ ಇವರು ಇದ್ದ ಬಸ್ ಬುಧವಾರ ಬೆಳಿಗ್ಗೆ ಬೆಳ್ತಂಗಡ...