ಹಾಸನ: ಕೋರ್ಟ್ ಆವರಣದಲ್ಲೇ ಪತಿಯೋರ್ವ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರದ ಕೋರ್ಟ್ ಆವರಣದಲ್ಲಿ ನಡೆದಿದೆ. ತಟ್ಟೆಕೆರೆ ಗ್ರಾಮದ ನಿವಾಸಿ ಚೈತ್ರಾ ಹತ್ಯೆಗೀಡಾದ ಮಹಿಳೆಯಾಗಿದ್ದು, ಪತಿ ಶಿವಕುಮಾರ್ ಎಂಬಾತ ಹತ್ಯೆ ಆರೋಪಿಯಾಗಿದ್ದಾನೆ. ಕೃತ್ಯದ ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದ...
ಹೊಸ ತುಳು ಸಿನೆಮಾ 'ಅಬತರ' ಆಗಸ್ಟ್ 18ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ನಿರ್ದೇಶಕ, ನಟ ಅರ್ಜುನ್ ಕಾಪಿಕಾಡ್ ತಿಳಿಸಿದ್ದಾರೆ. ಮಂಗಳೂರು ನಗರದ ಉರ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿನೆಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್, ಸಿನಿಪಾಲಿಸ್, ಪಿವಿಆರ್, ಮೂಡುಬಿದಿರೆಯಲ್ಲಿ ಅಮರಶ್ರೀ, ಬೆಳ್ತ...
ಹಸುವೊಂದು ಅಡ್ಡ ಬಂದು ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಶಾಲಾ ಶಿಕ್ಷಕಿಯೋರ್ವಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ವಂಡ್ಸೆ ಸಮೀಪದ ಚಿತ್ತೂರು ಎಂಬಲ್ಲಿ ನಡೆದಿದೆ. ಹೆಮ್ಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಅಂಬಿಕಾ ಮೃತ ದುರ್ದೈವಿ. ಇವರು ಗುರುವಾರ ಪತಿಯೊಂದಿಗೆ ಬೈಕ್ ನಲ್ಲಿ ಶಾ...
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ಮಂಗಳೂರು ನಗರದ ದಕ್ಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 75 ಬೋಟ್ ರ್ಯಾಲಿಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ಡಾ. ಕುಮಾರ್, ಮೀನುಗಾರಿಕಾ ಇಲಾಖೆಯ ಜಂಟಿ ನಿರ...
ಹಾಸನ: ಹಾಸನದ ರಸ್ತೆಗಳಲ್ಲಿ ಹೊಂಡಗುಂಡಿಗಳಿಂದಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಒಂದೆಡೆ ಮಳೆಯಿಂದ ಜನರ ಮನೆಗಳು ಕುಸಿದು ಬೀಳುತ್ತಿವೆ. ಇಂತಹ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯ ಮಾಡುವುದು ಬಿಟ್ಟು ಬಿಜೆಪಿ ಸರ್ಕಾರ ಪಾಲಿಸ್ಟಾರ್ ಬಾವುಟ ಹಂಚಿ ಜನರ ಕಣ್ಣೀಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ ಎಂದು ಹಾಸನ ಜೆಡಿಎಸ್ ಮುಖಂಡ ಪ್ರವೀಣ್ ಕುಮಾರ್...
ದೈವದ ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಿಂಗಾರ ಗರಡಿಯಲ್ಲಿ ನಡೆದಿದೆ. ಈ ಬಗ್ಗೆ ದೈವದ ಮನೆಯಲ್ಲಿ ಪೂಜೆ ಮಾಡಿಕೊಂಡು ಬರುತ್ತಿರುವ ನಾಗೂರಿನ ಗಣೇಶ್ ಪೂಜಾರಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಆಷಾಢ ಮಾಸದ...
ಮ್ಯಾನೇಜರ್ ನ ಗಮನ ಬೇರೆಡೆಗೆ ಸೆಳೆದು ಕ್ಯಾಶ್ ಡ್ರಾವರ್ ನಲ್ಲಿದ್ದ 52 ಸಾವಿರ ನಗದು ಕಳ್ಳತನ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ಸೌಪರ್ಣಿಕ ಹೆಚ್.ಪಿ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ನ ಮ್ಯಾನೇಜರ್ ಮನೋಜ್ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಅಪರಿಚಿತ ವಿದೇಶಿ ವ್ಯಕ್ತಿಯೋರ್ವ ಪೆಟ್ರೋಲ್ ಬಂಕ್ ಗೆ ಬ...
ಪರ್ಕಳ: ಹೆಜ್ಜೆಯ ಮೇಲೊಂದು ಹೆಜ್ಜೆಯನ್ನಿಟ್ಟು ಬಂದ ಚಿರತೆ ಮನೆಯ ಎದುರು ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದ ಘಟನೆ ಹೆರ್ಗಾ ಗ್ರಾಮದ ಗೋಳಿಕಟ್ಟೆಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ. ಬಾಲಚಂದ್ರ ಕೆದ್ಲಾಯ ಎಂಬವರ ಮನೆಯ ಮುಂಭಾಗದಿಂದ ರಾತ್ರಿ ವೇಳೆ ನಾಯಿಯನ್ನು ಚಿರತೆ ಹೊತ್...
ಬೆಳ್ತಂಗಡಿ; ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಪೊಯ್ಯ ನಿವಾಸಿ ಕಾಳಿಯಮ್ಮ(93)ಅಲ್ಪ ಕಾಲದ ಅಸೌಖ್ಯದ ಬಳಿಕ ಸ್ವ ಗೃಹದಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ.ಡೀಕಯ್ಯ ಅವರ ತಾಯಿಯಾಗಿರುವ ಕಾಳಿಯಮ್ಮ ಅವರು ಐದು ಮಂದಿ ಹೆಣ್ಣು ಮಕ್ಕಳನ್ನು ಹಾಗೂ ಅಪಾರ ಕುಟುಂಬ ವರ್ಗವನ್ನು ಅಗಲಿದ್ದಾರೆ. ಮಹಾನಾಯಕ ಮಾಧ್...
ಮಕ್ಕಳ ಕೈಯ್ಯಲ್ಲಿದ್ದ ರಕ್ಷಾ ಬಂಧನದ ರಾಖಿ ಕಿತ್ತೆಸೆದ ಆರೋಪ ಮಂಗಳೂರಲ್ಲಿ ಕೇಳಿ ಬಂದಿದ್ದು, ಕೊನೆಗೆ ಆ ವಿಚಾರ ಸುಖಾಂತ್ಯಗೊಂಡ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಕಾಟಿಪಳ್ಳದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಿನ್ನೆ ಮಕ್ಕಳು ರಕ್ಷಾಬಂಧನ ಹಿನ್ನೆಲೆಯಲ್ಲಿ ಕೈಗೆ ರಾಖಿ ಕಟ್ಟಿಕೊಂಡು ಬಂದಿದ್ದರು. ಇದೇ ವೇಳೆ ಕೆಲ ಶಿಕ್ಷಕರು...