ಸುರತ್ಕಲ್: ಕಳೆದ ಕೆಲವು ದಿನಗಳಿಂದ ಎನ್ಐಟಿಕೆ ಬಳಿ ಇರುವ ಟೋಲ್ ಗೇಟ್ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಭಾಂಧವ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ ನಡೆದಿರುವ ಬಗ್ಗೆ ವರದಿಯಾಗಿದೆ. ಕಳೆದ ಮಧ್ಯರಾತ್ರಿ ಸುಮಾರು 12.30ರ ಸುಮಾರಿಗೆ ಮೊದಲು ಇಬ್ಬರು ಮಂಗಳಮುಖಿಯರು ಆಗಮಿಸಿದ್ದರು....
ಮುಂಬೈ: ಬಾಲಿವುಡ್ನ ಹಿರಿಯ ಗಾಯಕ, ಸಂಗೀತ ನಿದೇರ್ಶಕ ಬಪ್ಪಿ ಲಹರಿ ಅನಾರೋಗ್ಯದಿಂದಾಗಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಒಂದು ತಿಂಗಳಿಂದ ಮುಂಬೈನ ಜುಹುವಿನಲ್ಲಿರುವ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಸೋಮವಾರವಷ್ಟೇ ಡಿಸ್ಚಾರ್ಜ್ ಆಗಿದ್ದರು. ಮನೆಗೆ ತೆರಳಿದ ನಂತರ ಮಂಗಳವಾರ ಮತ್ತೆ ಅವರ ಆರ...
ದೆಹಲಿ: ರೈಲು ಹಳಿಯ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ ಗುರುಗ್ರಾಮದಲ್ಲಿ ನಡೆದಿದೆ. ದೂರದಲ್ಲಿ ರೈಲು ಬರುತ್ತಿರುವ ವೇಳೆ ಸೆಲ್ಫಿ ತೆಗೆದರೆ ಚೆನ್ನಾಗಿ ಬರುತ್ತದೆ ಎಂದು ನಾಲ್ವರು ಯುವಕರಾದ ದೇವಿಲಾಲ್ ಕಾಲೋನಿಯ ಸಮೀರ್ (19), ಮೊಹಮ್ಮದ್ ಅನಸ್...
ಧಾರವಾಡ: ಕೋವಿಡ್ ಸೋಂಕಿನಿಂದಾಗಿ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡದ ಜನಪ್ರಿಯ ಹಿರಿಯ ಕವಿ ನಾಡೋಜ ಡಾ. ಚನ್ನವೀರ ಕಣವಿ ನಿಧನರಾಗಿದ್ದಾರೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕವಿ ನಾಡೋಜ ಡಾ. ಚನ್ನವೀರ ಕಣವಿ(93) ಅವರನ್ನು ಜ.14 ರಂದು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ...
ಚಂಡೀಗಢ: ಕೆಂಪು ಕೋಟೆಯಲ್ಲಿ ರೈತರ ಧ್ವಜ ಹಾರಿಸಿದ ಗಲಾಟೆಯ ಪ್ರಮುಖ ಆರೋಪಿ ನಟ ದೀಪ್ ಸಿಧು ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ದೆಹಲಿಯಿಂದ ಮಂಗಳವಾರ ಸ್ಕಾರ್ಫಿಯೋ ಕಾರಿನಲ್ಲಿ ಪಂಜಾಬ್ ಗೆ ತೆರಳುತ್ತಿದ್ದ ವೇಳೆ ವೆಸ್ಟರ್ನ್ ಪೆರಿಪರಲ್ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಸಿಘು ...
ಮುಂಬೈ: ವಾಟ್ಸಾಪ್ನಲ್ಲಿ ಮಗಳು ಹಾಕಿದ್ದ ಸ್ಟೇಟಸ್ನಿಂದ ತಾಯಿ ಕೊಲೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. 20 ವರ್ಷದ ಯುವತಿ ಇತ್ತೀಚೆಗೆ ವಾಟ್ಸಾಪ್ನಲ್ಲಿ ಸ್ಟೇಟಸ್ ಒಂದನ್ನು ಹಾಕಿದ್ದು, ಅದು ಯಾರಿಗೋ ಬೈಯುವಂತಿತ್ತು. ಅದನ್ನು ಕಂಡ ಆಕೆಯ ಸ್ನೇಹಿತೆಯೊಬ್ಬಳು, ತನಗೆ ಬೈಯುವುದಕ್ಕೆ ಈ ಸ್ಟೇಟಸ್ ಹಾಕಿದ್ದಾ...
ರಾಂಚಿ: ಡೊರಾಂಡಾ ಮೇವು ಹಗರಣದ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ದೋಷಿ ಎಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದಲ್ಲಿ 36 ಮಂದಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಮುಖ ಆರೋಪಿ ಲಾಲೂ ಪ್ರಸಾದ್ ಯಾದವ್ ಶಿಕ್ಷೆಯನ್ನು ಫೆ. 21ರಂದು...
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕುಳಿತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಹಾಗೂ ಚಾಲಕ ಸೇರಿ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ನಡೆದಿದೆ. ಚಾಲಕ ಪ್ರಕಾಶ (48), ಶಾಲಿನಿ (10) ಮತ್ತು ಯಶೋಧಾ (8) ಮೃತ ದುರ್ದೈವಿಗಳು. ಘಟನೆಯಲ್ಲಿ ಕಾರನಲ್ಲಿದ್ದ ಇಬ್ಬ...
ಹೈದರಾಬಾದ್: ಬಿಸಿ ಸಾಂಬಾರ್ ಪಾತ್ರೆಗೆ ಆಕಸ್ಮಿಕವಾಗಿ ಬಿದ್ದು ಎರಡು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿವ ಮತ್ತು ಭಾನುಮತ್ ಅವರ ಪುತ್ರಿ ತೇಜಸ್ವಿ ( 2) ಮೃತ ಬಾಲಕಿ. ಫೆ. 13ರಂದು ಈ ಘಟನೆ ನಡೆದಿದ್ದು, ಈಕೆ ತನ್ನ ಹುಟ್ಟುಹಬ್ಬದ ವೇಳೆ ಮನೆಯ ಮುಂದೆ ಆಟವಾಡು...
ರಾಜಸ್ಥಾನ: 13 ವರ್ಷ ಬಾಲಕಿಯನ್ನು ಅಪಹರಿಸಿ 16 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದ ಭರತ್ಪುರದಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತ ಅಪ್ರಾಪ್ತ ಬಾಲಕಿ ಫೆ.11ರಂದು ಮಧ್ಯಾಹ್ನ ಮೇಕೆ ಮೇಯಿಸಲು ಮತ್ತು ಕಟ್ಟಿಗೆ ತೆಗೆದುಕೊಳ್ಳಲು ಕಾಡಿಗೆ ತೆರಳಿದ್ದಳು. ಆ ವೇಳೆ ಗ್ರಾಮದ ಐವರು ಬಂದು ಸಂತ್ರಸ್ತೆಯನ್ನು ಅಪಹರಿಸಿದ್ದಾರೆ. ಬ...