ಉಡುಪಿ: ಉಡುಪಿ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತ ಫೆ.14 ರಿಂದ ಫೆ. 19ರ ವರೆಗೆ ಸೆಕ್ಷನ್ 144 ಜಾರಿಗೊಳಿಸಿದೆ. ಉಡುಪಿ ಜಿಲ್ಲಾಡಳಿತದ ಈ ಆದೇಶವು ಫೆ.14ರ ಬೆಳಗ್ಗೆ 6ರಿಂದ ಫೆ.19ರ ಸಂಜೆ 6ರವರೆಗೆ ಅನ್ವಯವಾಗಲಿದೆ ಆದೇಶದ ಪ್ರಕಾರ, ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು...
ಚೆನ್ನೈ: ತಮಿಳುನಾಡಿನ ಯುಎನ್ ಐ ಸುದ್ದಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ಫೋಟೋ ಜರ್ನಲಿಸ್ಟ್ ಟಿ. ಕುಮಾರ್ ಅವರು ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಿರಿಯ ಫೋಟೊ ಜರ್ನಲಿಸ್ಟ್ , 56 ವರ್ಷ ವಯಸ್ಸಿನ ಕುಮಾರ್ ಅವರು ಕಳೆದ ಕೆಲ ದಿನಗಳಿಂದ ಆರ್ಥಿಕ ತೊಂದರೆಯಿಂದ ಬಳಲುತ್ತಿದ್ದರು. ಅವರು ಕೆಲಸ ಮಾಡುತ್ತಿ...
ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರು ಭಾಷಣ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಸದಸ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದ ಘಟನೆ ಇಂದು ವಿಧಾನಸೌಧದಲ್ಲಿ ನಡೆಯಿತು. ಹಿಜಾಬ್ ಪ್ರಕರಣದಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ಅನ್ಯಾಯವಾಗಿದೆ ಎಂದು ಕಾಂಗ್ರೆಸ್...
ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿರುವ ಘಟನೆ ಶಿವಮೊಗ್ಗದ ಬಿ.ಎಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ. ಜಿಲ್ಲಾದ್ಯಂತ ಇಂದು ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿದೆ. ಆದರೆ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ...
ಹೈದರಾಬಾದ್: ಮೋದಿ ಸರ್ಕಾರವನ್ನು ಕಿತ್ತೊಗೆಯುವ ಸಮಯ ಹತ್ತಿರವಾಗಿದೆ. ಬಿಜೆಪಿಯನ್ನು ಕಿತ್ತೊಗೆಯಲು ಎಲ್ಲ ರಾಜಕೀಯ ಶಕ್ತಿಗಳು ಒಂದಾಗಬೇಕು. ಜನರೆಲ್ಲ ಒಗ್ಗೂಡಿದರೆ ನಾಯಕರ ಕುರ್ಚಿಗಳು ಕದಲುತ್ತವೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ. ಕಾಂಗ್ರೆಸ್ನತ್ತ ತಮ್ಮ ಒಲವಿನ ಸುಳಿವು ನೀಡಿರುವ ಕೆಸಿಆರ್, ದೇಶದಲ್...
ಬೆಂಗಳೂರು: ಆನ್ಲೈನ್ ಗೇಮ್ಗೆ ಗ್ರೀನ್ ಸಿಗ್ನಲ್ ನೀಡಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೂಜು ನಿಷೇಧಿಸಲು ಕರ್ನಾಟಕ ಪೊಲೀಸ್ ಕಾಯ್ದೆ-1963ಕ್ಕೆ ತರಲಾಗಿದ್ದ ತಿದ್ದುಪಡಿಯನ್ನು ರದ್ದುಪಡಿಸಿದೆ. ಆನ್ಲೈನ್ ಗೇಮಿಂಗ್ ನಿಷೇಧದ ಬಗ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ...
ತಿರುವನಂತಪುರಂ: ಸುಡುಮದ್ದು ಸ್ಫೋಟಗೊಂಡ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಭಾನುವಾರ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಜಿಷ್ಣು(28) ಮೃತ ಯುವಕ. ಭಾನುವಾರ ಮದ್ಯಾಹ್ನ 2 ಗಂಟೆ ಸುಮಾರಿಗೆ ಮದುವೆ ಕಾರ್ಯಕ್ರಮವೊಂದನ್ನು ಮುಗಿಸಿ ನವವಿವಾಹಿತರ ಮನೆಗೆ ಮರಳುತ್ತಿದ್ದ. ಈ ಸಂದರ್ಭದಲ್ಲಿ ಘಟನೆ ನಡೆದಿದೆ. ಇದರಲ್ಲಿ ಓರ್ವ ಮೃತಪಟ್ಟಿದ್ದು...
ಬೆಳಗಾವಿ: ಕಿಡಿಗೇಡಿಗಳು ಉತ್ತರ ಮತ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ಅವರ ಕಚೇರಿ ಮೇಲೆ ಕಲ್ಲು ಎಸೆದು ಪರಾರಿಯಾಗಿರುವ ಘಟನೆ ಭಾನುವಾರ ತಡರಾತ್ರಿ ಘಟನೆ ನಡೆದಿದೆ. ನಗರದ ಚವ್ಹಾಟ್ ಗಲ್ಲಿಯಲ್ಲಿರುವ ಕಚೇರಿ ಮೇಲೆ ಕಲ್ಲೆಸೆದಿದ್ದು, ಇದರಿಂದ ಕಿಟಕಿಯ ಗಾಜು ಪುಡಿಪುಡಿಯಾಗಿವೆ. ಕಲ್ಲು ತೂರಾಟ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ...
ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದಲ್ಲಿ 94ಸಿ ಯೋಜನೆಯಡಿ ಮಂಜೂರಾದ ಸ್ವಂತ ನಿವೇಶನದಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಬಡ ಕುಟುಂಬದ ಮನೆ ಮುಂದೆ ಗ್ರಾ.ಪಂ. ಸದಸ್ಯರೊಬ್ಬರು ಅಕ್ರಮ ಕಟ್ಟಡ ಕಟ್ಟಿ ದಿಗ್ಬಂಧನ ಮಾಡಿರುವ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಲಾಗಿದೆ. ಕಡಿರುದ್ಯಾವರ ಗ್ರಾಮದ ಎರ್ಮಾಳ್ ಪಲ್ಕ...
ಬೆಂಗಳೂರು: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯದ ಆವರಣದಲ್ಲಿ ಗಲಾಟೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್ ವಿರುದ್ಧ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿ...