ಆಂಧ್ರ: ಕುಡಿತದಿಂದ ಆಗುವ ಅನಾಹುತ ಒಂದೆರಡಲ್ಲ, ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಮೇಕೆ ಬದಲಿಗೆ ಮನುಷ್ಯನ ತಲೆಯನ್ನೇ ಕತ್ತರಿಸಿದ ಭೀಕರ ಘಟನೆಯೊಂದು ನಡೆದಿದೆ. ಸಂಕ್ರಾಂತಿ ಹಿನ್ನೆಲೆಯಲ್ಲಿ ಮೇಕೆಯನ್ನು ಬಲಿ ಕೊಡುತ್ತಿದ್ದ ವೇಳೆ ಮದ್ಯದ ಮತ್ತಿನಲ್ಲಿದ್ದ ಕುಡುಕ ಕುರಿಯ ಬದಲು ಕುರಿಯನ್ನು ಹಿಡಿದಿದ್ದ ಸುರೇಶ್ ಎಂಬವರ ಕುತ್ತಿಗೆಗೆ ಕತ್ತಿಯಿಂ...
ಬಿಹಾರ: ರೈತರಿದ್ದ ದೋಣಿಯೊಂದು ಮುಳುಗಿ 21 ಮಂದಿ ನಾಪತ್ತೆಯಾಗಿರುವ ಘಟನೆ ಬಿಹಾರ ಗೋಪಾಲ್ ಗಂಜ್ ಜಿಲ್ಲೆಯಲ್ಲಿ ನಡೆದಿದ್ದು, ಮೂವರ ಮೃತದೇಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಟ್ಟಿಯಾ - ಗೋಪಾಲ್ ಗಂಜ್ ಗಡಿಯಲ್ಲಿರುವ ಭಗವಾನ್ ಪುರ ಗ್ರಾಮದ ಬಳಿಯಿರುವ ಗಂಡಕ್ ನದಿಯಲ್ಲಿ ದುರಂತ ಸಂಭವಿಸಿದ್ದು, ದೋಣಿಯಲ್ಲಿ ಕುಚಯ್ ಕೋಟ್ ಮತ್ತು...
ನವದೆಹಲಿ: ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅಪರ್ಣಾ ಯಾದವ್ ಅವರು ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಬಳಿಕ ಮಾತ...
ಬಾಗಲಕೋಟೆ: 2023ರಲ್ಲಿ ದೇವಿ ಶಾಪದಿಂದ ಬಿಜೆಪಿ ಧೂಳೀಪಟ ಆಗಲಿದೆ. ದೇವರ ಹಾಗೂ ರೈತರ ಶಾಪದಿಂದ ಬಿಜೆಪಿ ಹೋಗುವ ಕಾಲ ಬರಬಹುದು ಎಂದು ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬಾದಾಮಿ ಶ್ರೀ ಬನಶಂಕರಿ ಜಾತ್ರೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾದಾಮಿ ಶ್ರೀ ಬನಶಂಕರಿ ದೇವಿ ಜಾತ್ರೆ ಶತಮಾನದ ಇ...
ವಿಜಯಪುರ: ಜಿಲ್ಲೆಯಲ್ಲಿ ಇದೀಗ ಮತ್ತೊಮ್ಮೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಶಾಸಕ ಹಾಗೂ ಕ್ಷೇತ್ರದ ಬಿಜೆಪಿ ಉಪಾಧ್ಯಕ್ಷರ ಬೆಂಬಲಿಗರ ಮಧ್ಯೆ ಮಾತಿನ ಜಟಾಪಟಿ ನಡೆದಿದೆ ಬಗ್ಗೆ ವರದಿಯಾಗಿದೆ. ಶಾಸಕ ಸೋಮನಗೌಡ ಸ್ಥಳೀಯ ಕಾರ್ಯಕರ್ತರನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ, ನಮ್ಮ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂದು ಬಿಜೆಪಿ ಮ...
ನವದೆಹಲಿ: ಬುಧವಾರ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿರುವ ಕೆಲವು ವಿಮಾನ ಸೇವೆಗಳನ್ನು ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಟ್ವೀಟ್ ಮಾಡಿ ಸ್ಪಷ್ಟಪಡಿಸಿದೆ. ಪ್ರಯಾಣಿಕರಿಗೆ ಈ ಮೂಲಕ ಏರ್ ಇಂಡಿಯಾ ಮಾಹಿತಿ ನೀಡಿದ್ದು, ದೆಹಲಿಯಿಂದ ಅಮೆರಿಕದ ಜಾನ್ ಎಫ್ ಕೆನಡಿ ಇಂಟರ್ನ್ಯಾಷನಲ್ ಏರ್ಫೋರ್ಟ್, ದೆಹಲಿಯಿಂದ ಅಮೆರಿಕದ ಓಹ...
ಬೆಂಗಳೂರು: ಕೇಂದ್ರ ಸರ್ಕಾರದ ಒಡೆತನದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಖಾಸಗೀಕರಣಗೊಳಿಸುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ಬಿಇಎಂಎಲ್ ಗೆ ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ಬಿಇಎಂಎಲ್ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ರುದ್ರಯ್ಯ ಮತ್ತಿತರರು ಸಲ್ಲಿಸಿರುವ ಸ...
ಬೆಂಗಳೂರು: ಶುಕ್ರವಾರ ಮತ್ತೆ ತಜ್ಞರ ಜೊತೆ ಸಭೆ ಮಾಡಿ ಹಾಲಿ ನಿರ್ಬಂಧಗಳ ಪುನರ್ ಪರಿಶೀಲನೆ ಮಾಡುತ್ತೇವೆ. ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ಸಡಿಲಿಕೆ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ...
ಬೆಂಗಳೂರು: ಮಂಗಳೂರಿನ ಪಚ್ಚನಾಡಿ ಭೂಭರ್ತಿ ಘಟಕದಲ್ಲಿ ಬಹಳ ದಿನಗಳಿಂದ ಉಳಿದಿರುವ ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ವರ್ತನೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ವಿಲೇವಾರಿ ಕಾರ್ಯವನ್ನು ಶೀಘ್ರವಾಗಿ ಆರಂಭಿಸದಿದ್ದರೆ ಪಾಲಿಕೆ ಆಯುಕ್ತರು ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು...
ಬೆಂಗಳೂರು: ಕೋವಿಡ್ ಲಸಿಕೆ ಸೋಂಕಿನ ತೀವ್ರತೆ ಹಾಗೂ ಸಂಭವಿಸಬಹುದಾದ ಸಾವು ತಪ್ಪಿಸಬಹುದೇ ಹೊರತು ಸೋಂಕು ಬರುವುದನ್ನು ತಪ್ಪಿಸಲು ಆಗುವುದಿಲ್ಲ. ಹೀಗಾಗಿ ಜನರು ಇದನ್ನು ತಪ್ಪು ತಿಳಿದುಕೊಳ್ಳಬಾರದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಲಸಿಕೆ ಹಾಕಿಸಿಕೊಳ್ಳುವುದರಿಂದ ಖಂಡಿತವಾಗಿ ನಿಮ್ಮ ಪ್ರಾ...