ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಚೌಧರಿ ಅವರ ಅಮಾನತು ಪ್ರಸ್ತಾವನೆಯನ್ನು ಮಂಡಿಸಿದ್ದಾರೆ. 'ಸದಸ್ಯ ಮತ್ತು ...
ಟಿಕೆಟ್ ಇಲ್ಲದೇ ವಂದೇ ಭಾರತ್ ರೈಲಲ್ಲಿ ಪ್ರಯಾಣ ಮಾಡುತ್ತಿದ್ದ ವ್ಯಕ್ತಿಯೊಬ್ಬ ಟಿಕೆಟ್ ಕಲೆಕ್ಟರ್ ಗಳ ಕಣ್ತಪ್ಪಿಸಲು ಟಾಯ್ಲೆಟ್ ಗೆ ಹೋಗಿ ಅಲ್ಲಿ ಸಿಗರೇಟ್ ಸೇದುವ ಮೂಲಕ ಅವಾಂತರ ಸೃಷ್ಟಿಸಿದ ಘಟನೆ ತಿರುಪತಿ-ಸಿಕಂದರಾಬಾದ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ. ರೈಲು ಸಂಖ್ಯೆ – 20702 ರ ಸಿ-13 ಬೋಗಿಯಲ್ಲಿ ಆಂಧ್ರಪ್ರದೇಶದ ...
ಮಣಿಪುರ ಹಿಂಸಾಚಾರದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಲೋಕಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಗುರುವಾರ ಸೋಲಾಗಿದೆ. ಜುಲೈ 26 ರಂದು ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅದನ್ನು ಅಂಗೀಕರಿಸಿ, ಚರ್ಚೆಗ...
ಚಾಮರಾಜನಗರ: ಇನ್ನೂ ಕೂಡ ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ, ಕುಮಾರಸ್ವಾಮಿ ಅವರಿಗೆನಾದರೂ ಕಾಯುತ್ತಿದ್ದೀರಾ ಎಂದು ಕೈ ಮುಖಂಡ ವಿ.ಸುದರ್ಶನ್ ಲೇವಡಿ ಮಾಡಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿ ಅವರನ್ನು ವಿಪಕ್ಷ ನಾಯಕನ್ನಾಗಿ ಘೋಷಣೆ ಮಾಡಲ...
ಬೆಂಗಳೂರು; ಕ್ಯಾನ್ಸರ್ ಚಿಕಿತ್ಸೆಗಿಂತ ನಗರ ಪ್ರದೇಶಗಳಲ್ಲಿ ಉಳಿದು ಊಟ, ವಸತಿ ಮತ್ತಿತರ ಸೌಲಭ್ಯ ಪಡೆಯುವುದು ದುಬಾರಿಯಷ್ಟೇ ಅಲ್ಲದೇ ಬಹುದೊಡ್ಡ ಸವಾಲು. ಆರ್ಥಿಕವಾಗಿ ಸಬಲರಲ್ಲದವರು ವಸತಿ ಸೌಲಭ್ಯದೊಂದಿಗೆ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುವುದು ನಿಜಕ್ಕೂ ಗಗನ ಕುಸುಮವೇ ಆಗಿದೆ. ಇಂತಹ ಗಂಭೀರ ಸಮಸ್ಯೆಗೆ, ಅದರಲ್ಲೂ ವಿಶೇಷವಾಗಿ ಕ್ಯಾನ್ಸರ್...
ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಇದರ ಪರಿಣಾಮ ಹಳ್ಳಿಗಳಿಗೆ ನೀರು ನುಗ್ಗಿದ್ದು, ಮನೆಗಳು ಕುಸಿದು ಬಿದ್ದಿವೆ. ಈ ನಡುವೆ ಒಂದೇ ಮನೆಯ ಐವರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೋಂಟಾ ಸಾಹಿಬ್ ಪ್ರದೇಶದಲ್ಲಿ ಬುಧವಾರ ರಾತ್ರಿ ಮೇಘಸ್ಪೋಟ ಸಂಭವಿಸಿದೆ. ಇದರ ಪರಿಣಾಮ ಮಾಳಗಿ...
ಸಂಸದ ರಾಹುಲ್ ಗಾಂಧಿ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಸಂಸತ್ತಿನಲ್ಲಿ ಫ್ಲೈಯಿಂಗ್ ಕಿಸ್ ನೀಡಿ ಅನುಚಿತವಾಗಿ ವರ್ತಿಸಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದೆಯರು ಸ್ಪೀಕರ್ ಗೆ ಮನವಿ ಪತ್ರ ನೀಡಿದ ಬೆನ್ನಲ್ಲೇ, ರಾಹುಲ್ ಗಾಂಧಿ ಸಂಸತ್ತಿನಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟಿರುವುದನ್ನು ನಾನು ...
ಬೆಂಗಳೂರು: ಅನ್ನದಾತರಿಗೆ ಕಾಂಗ್ರೆಸ್ ಸರಕಾರವು ಅನ್ಯಾಯ ಮಾಡುತ್ತಿದೆ. ಇದು ಬಜೆಟ್ನಲ್ಲೂ ಪ್ರತಿಫಲಿಸಿದೆ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆಕ್ಷೇಪಿಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಇಂದು ಬಿಜೆಪಿ ಬೆಂಗಳೂರು ಮಹಾನಗರ ರೈತ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್...
ಬೆಂಗಳೂರು:“ಗುತ್ತಿಗೆದಾರರು ಯಾರನ್ನು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ನಾವು ತಡೆಯಲಾಗದು. ಅವರಿಗೆ ಯಾರು ಸಲಹೆ, ಮಾರ್ಗದರ್ಶನ ಕೊಡಬೇಕೋ ಕೊಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳು ಗುತ್ತಿಗೆದಾರರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನ್ಯಾಯ ಕೊಡಿಸಿ ಎಂದು ಕೇಳಿರುವ...
ಬಿಬಿಎಂಪಿ ಕೇಂದ್ರ ಕಛೇರಿ ಅವರಣದಲ್ಲಿ ಅಧಿಕಾರಿ ಮತ್ತು ನೌಕರರ ಹಿತರಕ್ಷಣೆ ಮತ್ತು ಆರೋಗ್ಯಭಾಗ್ಯ ಕರುಣಿಸಲಿ ಎಂದು ಅದಿಶಕ್ತಿ ದೇವಸ್ಥಾನದಲ್ಲಿ ಬಿಬಿಎಂಪಿ ಅಧಿಕಾರಿ ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಎ.ಅಮೃತ್ ...