ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಮುಸ್ಲಿಂ ಮುಖಂಡರ ಮಹತ್ವದ ಸಭೆಯು ಮಂಗಳೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಪ್ರಮುಖವಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿನ ಗೊಂದಲದ ಕುರಿತು ಹಾಗೂ ಜಿಲ್ಲೆಯಲ್ಲಿ ಸಮುದಾಯ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿ...