ಬೈಕ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆಯಲ್ಲಿ ರಾತ್ರಿ ನಡೆದಿದೆ. ಕಾರು ಯೂ ಟರ್ನ್ ತೆಗೆಯುವ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ...
ಮಂಗಳೂರು ನಗರದ ಪುರಭವನ ಮತ್ತು ಮೈದಾನ ರಸ್ತೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಭಾನುವಾರದ ರಜಾದಿನ ಬಟ್ಟೆ, ತರಕಾರಿ, ಹಣ್ಣು, ರೇಷನ್ ಸಾಮಾಗ್ರಿಗಳನ್ನು ಮಾರಾಟ ಮಾಡಿ ಬದುಕುತ್ತಿರುವ ಬಡ ಬೀದಿ ವ್ಯಾಪಾರಿಗಳಿಗೆ ಕಳೆದ ಭಾನುವಾರ ವ್ಯಾಪಾರ ಮಾಡಲು ನಗರಪಾಲಿಕೆಯ ಕೆಲವು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು ಅವರ ಸರಕುಗಳನ್ನು ವಶಪಡಿಸಿದ್ದರು. ...
ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಕೂಡಾ ಗಾಯಗೊಂಡಿದ್ದಾರೆ. ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ಮುಹಮ್ಮದ್ ನೌಫಾಲ್ (26) ಮೃತಪಟ್ಟಿದ್ದಾರೆ. ಸಹಸವಾರ...
ಚಲಿಸುತ್ತಿದ್ದ ಕಾರಿನೊಳಗೆ ಅಲ್ಯೂಮಿನಿಯಂ ಪಟ್ಟಿಗಳು ಹೊಕ್ಕು ಕಾರು ಚಾಲಕ ಪವಾಡ ಸದೃಶ್ಯವಾಗಿ ಪಾರಾದ ಘಟನೆ ಮಂಗಳೂರು ನಗರದ ನಂತೂರು ಜಂಕ್ಷನ್ನಲ್ಲಿ ನಡೆದಿದೆ. ಅಲ್ಯೂಮಿನಿಯಂ ಪಟ್ಟಿ ಕೊಂಡೊಯ್ಯುತ್ತಿದ್ದ ಪಿಕಪ್ ವಾಹನ ಸಡನ್ ಬ್ರೇಕ್ ಹಾಕಿದ ಪರಿಣಾಮ ಅಲ್ಯುಮಿನಿಯಂ ಪಟ್ಟಿಗಳು ಹಿಂದೆ ಬರುತ್ತಿದ್ದ ಕಾರಿನೊಳಗೆ ನುಗ್ಗಿವೆ. ಈ ಸಂದರ್ಭದಲ್ಲಿ ...
ಚಾಲಕನ ನಿಯಂತ್ರಣ ತಪ್ಪಿ ಮೀನಿನ ತ್ಯಾಜ್ಯ ಸಾಗಾಟ ಮಾಡುತ್ತಿದ್ದ ಟೆಂಪೊವೊಂದು ರಸ್ತೆಯಲ್ಲಿ ಉರುಳಿಬಿದ್ದ ಘಟನೆ ಮಂಗಳೂರು ನಗರದ ಹೊರವಲಯದ ಕಲ್ಲಾಪು ಬಳಿ ನಡೆದಿದೆ. ಮಂಗಳೂರು ದಕ್ಕೆಯಿಂದ ಮೀನು ತ್ಯಾಜ್ಯವನ್ನು ಹೇರಿಕೊಂಡು ಉಳ್ಳಾಲದತ್ತ ಸಂಚರಿಸುತ್ತಿದ್ದ ಟೆಂಪೊ ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ...
ವ್ಯಕ್ತಿಯನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಸಂಜೆ ನಡೆದಿದೆ. ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್ನಲ್ಲಿ ಕೆಲಸಕ್ಕಿದ್ದ ಅತ್ತಾವರ ಮೂಲದ ರಾಘವ ಆಚಾರಿ ಎಂಬುವವರನ್ನು ಕೊಲೆ ಮಾಡಲಾಗಿದೆ. ವ್ಯಕ್ತಿಯೊಬ್ಬ ಅಂಗಡಿಗೆ ಪ್ರವೇಶಿಸಿ ರಾಘವ ಆಚಾರಿಗೆ ಚೂರಿಯಿಂದ ಇರಿದಿದ್ದು, ಗಂಭೀರ ಗಾಯಗೊಂಡ ಅವರನ್ನು...
ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಜೆಯಿಂದಲೇ ಪೊಲೀಸರು ತೀವ್ರ ತಪಾಸಣೆ ನಡೆಸಿದರು. ನಗರ ಕಮಿಷನರೇಟ್ ವ್ಯಾಪ್ತಿಯ 32 ಸ್ಥಳಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು, ಎಲ್ಲಾ ಕಡೆಯೂ ಪೊಲೀಸರು ದ್ವಿಚಕ್ರ ವಾಹನಗಳು, ರಿಕ್ಷಾ, ಕಾರು, ಲಾರಿ ಮತ್ತ...
ಕಳೆದ ತಿಂಗಳು ಮಂಗಳೂರು ನಗರದ ನಾಗುರಿಯಲ್ಲಿ ನಡೆದ ಕುಕ್ಕರ್ ಸ್ಫೋಟದ ಗಾಯಾಳು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ಮುಖ್ಯಸ್ಥರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ರ ಬರೆದಿದೆ. ಸಂತ್ರಸ್ತ ಕುಟುಂಬದಿಂದ ಯಾವುದೇ ವೆಚ್ಚವನ್ನು ಭರಿಸಲು ಒತ್ತಡ ಹಾಕದ...
ಸ್ಮಾರ್ಟ್ ಸಿಟಿ ಹೆಗ್ಗಳಿಕೆಯ ಈ ನಗರದಲ್ಲಿ ಇದೇ ಅಭಿವೃದ್ಧಿ ಕಾಣದ ಊರು. ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆ ಏನೂ ಆಗಿಲ್ಲ. ಹೀಗಾಗಿ ಜನ್ರು 'ನೋ ರೋಡ್, ನೋ ವೋಟ್' ಅಂತಾ ಹೇಳ್ತಿದ್ದಾರೆ. ಹೌದು..! ಮಂಗಳೂರು ಮಹಾನಗರ ಪಾಲಿಕೆ ಎಂದರೆ ಸ್ಮಾರ್ಟ್ ಸಿಟಿ ಎಂಬ ಬಿರುದು ಪಡೆದ ನಗರ. ಆದ್ರೆ ಈ ಸ್ಮಾರ್ಟ್ ಸಿಟಿಯಲ್ಲಿ ಅಭಿವೃದ್ಧಿ ಕಾಣದ ವ...
ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಗಾರೆ ಕೆಲಸದ ಕಾರ್ಮಿಕರೊಬ್ಬರ ಮೇಲೆ ಮೂವರು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ರಾಯಿ ಸಮೀಪದ ಕುದ್ಕೋಳಿ ಎಂಬಲ್ಲಿ ನಡೆದಿದೆ. ಇಸಾಕ್ (43) ಹಲ್ಲೆಗೊಳಗಾದವರು. ಬಿ.ಸಿ.ರೋಡ್ನಿಂದ ಮೂಡುಬಿದಿರೆ ಗಂಟಾಲ್ಕಟ್ಟೆ ಎಂಬಲ್ಲಿಗೆ ಕೆಲಸಕ್ಕೆ ಹೋಗಲು ಬಸ್ನಲ್ಲಿ ಪ್ರಯಾಣಿ...