ಲಖನೌ: ಪಕ್ಷದಿಂದ ಅಮಾನತುಗೊಂಡ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯ ಐವರು ಶಾಸಕರು ಸಮಾಜವಾದಿ ಪಕ್ಷದ (ಎಸ್ ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿರುವ ಪಕ್ಷದ ವರಿಷ್ಠೆ ಮಾಯಾವತಿ, ಬಿಎಸ್ ಪಿ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರಲಿದ್ದಾರೆ ಎಂಬುದು ಕೇವಲ ಭ್ರಮೆ ಎಂದಿದ್ದಾರೆ. ...