ಉಡುಪಿ: ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ ಅನ್ನು ಜಿಲ್ಲೆಯಾದ್ಯಂತ ಕ್ರೆಸ್ತ ಬಾಂಧವರು ಗುರುವಾರ ಭಕ್ತಿ ಭಾವದಿಂದ ಆಚರಿಸಿದರು. ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್...