ಮಂಗಳೂರು ನಗರದ ಪಂಪ್ ವೆಲ್ ಸಮೀಪದ ನಾಗುರಿಯಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ನವೆಂಬರ್ 19ರಂದು ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಆರೋಪಿ ಶಾರಿಕ್ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರು ನಗ...