ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಬಳಿಕ ಕೇರಳ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರಗಳು ವರದಿಯಾಗಿದ್ದು, ಇಂಡಿಯನ್ ಯೂನಿಯನ್ ಮುಸ್ಲಿಮ್ ಲೀಗ್ (ಐಯುಎಂಎಲ್) ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೇರಳ ರಾಜ್ಯದಲ್ಲಿ ಮೂರು ಪ್ರಮುಖ ಹಿಂಸಾಚಾರಗಳು ನಡೆದಿದೆ. ಕಣ್ಣೂರಿನ ಕುತ್ತುಪರಂಬಾದಲ್ಲಿ 21 ವರ್ಷ ವಯಸ್ಸಿನ ಮ...