ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಹೋದರ ನವೀನ್ ಕುಮಾರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿಯಾಗಿರುವ 56 ವರ್ಷ ವಯಸ್ಸಿನ ನವೀನ್ ಕುಮಾರ್ ಕೃಷಿಕರಾಗಿದ್ದರು...