ತೀವ್ರವಾಗಿ ಹದಗೆಟ್ಟಿರುವ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮಂಗಳವಾರ ಗುಂಡಿ ಬಿದ್ದ ರಸ್ತೆಯಲ್ಲೇ ಉರುಳು ಸೇವೆ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕೇಸರಿ ನಿಲುವಂಗಿ ಧರಿಸಿದ್ದ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ತೆಂಗಿನಕಾಯ...