ತಿರುವನಂತಪುರಂ: ಕೇರಳದ ಏಕೈಕ ಬಿಜೆಪಿ ಶಾಸಕ ಓ.ರಾಜಗೋಪಾಲ್ ಕೇರಳ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿ ನಿರ್ಣಯವನ್ನು ಬೆಂಬಲಿಸಿದ್ದಾರೆ. ಗುರುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೃಷಿ ಕಾಯ್ದೆ ವಿರೋಧಿ ಮಸೂದೆಯನ್ನು ಮಂಡಿಸಿದರು. ಅಧಿವೇಶನದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಓ.ರಾಜಗೋಪಾಲ್, ಕೇರಳ ಸರ್ಕಾರ ಮಂಡಿಸಿದ ನಿರ್ಣಯಕ್ಕೆ ಸ...