ಧಾರವಾಡ: ಪಟಾಕಿ ಸಾಗಿಸುತ್ತಿದ್ದ ಲಾರಿಯೊಂದು ಅಪಘಾತಕ್ಕೀಡಾಗಿದ್ದು, ಇದರಿಂದ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ಧಾರವಾಡ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಪಟಾಕಿ ಹೊತ್ತಿದ್ದ ಲಾರಿಯೊಂದು ಧಾರವಾಡ ಬೈಪಾಸ್ ನ ಇಟ್ಟಿಗಟ್ಟಿ ಬಳಿ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳವು ಪ...