ಬೆಂಗಳೂರು: ಇಂದು ಜನರು ಸಾರ್ವಜನಿಕ ಪ್ರದೇಶಗಳಲ್ಲಿ ಆರಾಮವಾಗಿ ಓಡಾಡುತ್ತಿದ್ದಾರೆ ಎಂದರೆ ಅದಕ್ಕೆ ಪೌರ ಕಾರ್ಮಿಕರೇ ಕಾರಣ. ಒಂದು ದಿನ ಪೌರ ಕಾರ್ಮಿಕರು ಕೆಲಸ ಮಾಡುವುದಿಲ್ಲ ಎಂದು ಕುಳಿತರೇ ಇಡೀ ನಗರವೇ ಗಬ್ಬೆದ್ದು, ಜನರು ಮೂಗು ಮುಚ್ಚಿಕೊಂಡು ಹೋಗುವಂತ ಪರಿಸ್ಥಿತಿ ನಿರ್ಮಾಣವಾಗಬಹುದು. ಆದರೆ, ಸ್ವಲ್ಪವೂ ವಿರಮಿಸದೇ ಇಡೀ ನಗರವನ್ನು ಸ್ವಚ್ಛವಾ...