ಮಂಗಳೂರಿನ ಪಿಲಿನಲಿಕೆ ಪ್ರತಿಷ್ಠಾನ ಮಂಗಳೂರು ಇದರ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7" ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಿತು. ತುಳುನಾಡಿನ ಅದ್ಭುತ ಕಲಾ ಪರಂಪರೆ ಮತ್ತು ಇಂದು ಇಡೀ ವಿಶ್ವದ ಗಮನವನ್ನು ಸೆಳೆದಿರುವ ಹುಲಿವೇಷ ಕುಣಿತದ ಮೂಲ ಸ್ವರೂಪವನ್ನು ಉಳಿಸುತ್ತಾ ಅದನ್ನು ಬೆಳ...