ಗೋವುಗಳನ್ನು ಏಕೆ ಕಡಿಯಬಾರದು ಎನ್ನುವ ನಿಮ್ಮ ಮನಸ್ಥಿತಿಯೇ ನನಗೆ ವಿಚಿತ್ರವಾಗಿ ಕಾಣಿಸುತ್ತಿದೆ. ಒಂದಿಷ್ಟು ಕಸಾಯಿ ಕಾಖಾನೆಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ, ಗೋವುಗಳ ದಾರುಣ ಅಂತ್ಯ ಎಲ್ಲವನ್ನು ನೋಡಿದ ನಂತರ ಮತ್ತೊಮ್ಮೆ ಆಲೋಚನೆ ಮಾಡಿ ಹೇಳಿಕೆ ನೀಡಿ ಎಂದು ಮಾಜಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...