ವಿಜಯಪುರ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸುವುದಾಗಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ಇಲ್ಲಿನ ಕೆಎಂಎಫ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡಿದಲ್ಲಿ ಉಂಟಾಗುವ ಸಾಧಕ, ಬಾಧಕಗಳ ಕ...