ಉಡುಪಿ: ಗ್ರಾಮ ಪಂಚಾಯತ್ ನ ಆಡಳಿತಕ್ಕೆ ಸಂಬಂಧಿಸಿದಂತೆ ಟೀಕೆಗಳನ್ನು ಮಾಡುತ್ತಿದ್ದ ವ್ಯಕ್ತಿಯೋರ್ವರನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಕಾರು ಹರಿಸಿ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಗ್ರಾ.ಪಂ. ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ತಾಲೂಕು ವ್ಯಾಪ್ತಿಯ ಯಡಮೊಗೆ ಗ್ರಾಮ ಪಂಚಾಯತ್ ವ್ಯಾಪ...