ಅನಾರೋಗ್ಯ ಪೀಡಿತ ಮಕ್ಕಳಿಗೆ ನೆರವು ನೀಡಲು, ಬಡ ಯುವತಿಯ ಮದುವೆಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಯುವಕನೋರ್ವ ಪ್ರೇತದ ವೇಷ ಹಾಕಿ ಹಣ ಸಂಗ್ರಹಕ್ಕೆ ಮುಂದಾಗಿದ್ದಾನೆ. ಹೌದು. ನವರಾತ್ರಿಯ ಈ ಸಂದರ್ಭದಲ್ಲಿ ಪ್ರೇತದ ವೇಷದ ಮೂಲಕ ಮನೆ ಮನೆಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ನೀರೊಲ್ಬೆ ನಿವ...