ಬೆಂಗಳೂರು: 2021-22 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗಿಂತ ಈ ಬಾರಿಯ ಫಲಿತಾಂಶದಲ್ಲಿ ಶೇ.0.8 ಹೆಚ್ಚಾಗಿದೆ. ಮಲ್ಲೆಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಿದರು...