ಮಂಗಳೂರು: ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ಹಿರಿಯ ಕಾರ್ಪೊರೇಟರ್ ಜಯಾನಂದ ಅಂಚನ್ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಆಗಿ ಬಿಜೆಪಿಯ ಕಾರ್ಪೊರೇಟರ್ ಪೂರ್ಣಿಮಾ ಆಯ್ಕೆಯಾದರು. ಇಂದು ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಇಬ್ಬರು ಶಾಸಕರು ಸೇರಿದಂತೆ ಉಪಸ್ಥಿತರಿದ್ದ ಒಟ್ಟು ಮತದಾರರಲ್ಲಿ 46 ಮಂದಿ ಜಯಾನಂದ ಪರ ಮತ ಚಲಾಯಿಸಿದರು. ...