ಮಂಗಳೂರು: ನಗರದ ನಾಗುರಿ ಎಂಬಲ್ಲಿ ನವೆಂಬರ್ 19ರಂದು ನಡೆದ ಕುಕ್ಕರ್ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಗೋರಿಗುಡ್ಡ ನಿವಾಸಿ ಪುರುಷೋತ್ತಮ ಪೂಜಾರಿ ಗುಣಮುಖರಾಗಿದ್ದಾರೆ. ಅಲ್ಲದೇ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದ್ದಾರೆ. ನಾಗುರಿ ಎಂಬಲ್ಲಿ ಚಲಿಸುತ್ತಿದ್ದ ಆಟೊ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡಿತ್...