ಬೈಕ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ದರ್ಜೆ ಬೈಪಾಸ್ ನಲ್ಲಿ ಸಂಭವಿಸಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ ಅಬ್ದುಲ್ ಅಝೀಝ್ ಎಂಬವರ ಪುತ್ರ ನೌಶಾದ್ (22) ಮೃತಪಟ್ಟ ಯುವಕ. ...