ರಾಯಚೂರು: ರಸ್ತೆಯಲ್ಲಿ ಹೋಗುತ್ತಿರುವ ಮಹಿಳೆಯರ ಸೀರೆ ಎಳೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು, ಬಳಿಕ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾ...