ಸಕಲೇಶಪುರ: ಪ್ರಚೋದನಾಕಾರಿ ಭಾಷಣ ಮಾಡಿದ್ದ ಬಜರಂಗದಳದ ಮುಖಂಡ, ರೌಡಿಶೀಟರ್ ರಘುವಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ಇದೇ ಸಂದರ್ಭದಲ್ಲಿ ರಘು ತಲೆಮರೆಸಿಕೊಂಡಿರುವ ಘಟನೆ ನಡೆದಿದೆ. ಗೋಹತ್ಯೆಯನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಸಕಲೇಶಪುರ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ರೌಡಿಶೀಟರ್ ರ...