ಬೆಂಗಳೂರು: ಸಚಿವ ಎಸ್.ಟಿ.ಸೋಮಶೇಖರ್ ಅವರ ಪುತ್ರ ನಿಶಾಂತ್ ಅವರನ್ನು ಬೆದರಿಸಿ 1 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ರಾಹುಲ್ ಭಟ್ ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಹುಲ್ ನಗರದ ಪ್ರಮುಖ ಜ್ಯೋತಿಷಿಯ ಮಗ ಎಂದು ತಿಳಿದು ಬಂದಿದ್ದು, “ನಿಮ್ಮ ಮಗನ ಅಶ್ಲೀಲ ವಿಡಿಯೋ ನ...