ಢಾಕಾ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಶವ ಕಳೆದ ಸೋಮವಾರ ಕೆರಣಿಗಂಜ್ ನ ಹಜರತ್ ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಶಿಮು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಭಾನುವಾರ ಕಲಬ...