ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ವೇಳೆ ಬಿ.ಎಸ್.ಯಡಿಯೂರಪ್ಪನವರು ಕಣ್ಣೀರು ಹಾಕಿದ ವಿಡಿಯೋವನ್ನು ನೋಡಿ ಮನನೊಂದ ಅವರ ಅಭಿಮಾನಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. 35 ವರ್ಷ ವಯಸ್ಸಿನ ರವಿ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ನಿನ್ನೆ ಮುಖ್ಯಮಂತ...