ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ 2023-24 ನೇ ಸಾಲಿನ ಬಜೆಟ್ ರೈತರು, ಕೃಷಿ ಕಾರ್ಮಿಕರು, ಮಹಿಳೆಯರು, ಹಿಂದುಳಿದ ವರ್ಗಗಳು, ವಿದ್ಯಾರ್ಥಿ ಸಮೂಹ ಸ್ನೇಹಿ ಮತ್ತು ಒಟ್ಟಾರೆ ನಗರಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಒತ್ತು ಕೊಡುವ ಬಜೆಟ್ ಆಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವ...