ಚಿತ್ರದುರ್ಗ: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಭಗತ್ ಸಿಂಗ್ ಪಾತ್ರ ಅಭ್ಯಾಸ ಮಾಡುತ್ತಿದ್ದ ಬಾಲಕನೋರ್ವ ಆಕಸ್ಮಿಕವಾಗಿ ನೇಣಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಕೋಟೆನಾಡು ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಮೃತಪಟ್ಟ ಬಾಲಕನಾಗಿದ್ದು, ಈತ ಇಲ್ಲಿನ ಎಸ್ ಎಲ್ ವಿ ಶಾಲೆಯಲ್ಲಿ 7ನೇ ತರ...