ಬೆಂಗಳೂರು: ಅನಾರೋಗ್ಯದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟ ಸತ್ಯಜಿತ್ ಇಂದು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಆರೋಗ್ಯ ಸಮಸ್ಯೆಯಿಂದ ಬೌರಿಂಗ್ ಆಸ್ಪತ್ರೆಯಲ್ಲಿ ಸಾವು- ಬದುಕಿನ ನಡುವೆ ಹೋರಾಡುತ್ತಿದ್ದ ಅವರನ್ನು ಉಳಿಸಲು ಸಾಕಷ್ಟು ಪ್ರಯತ್ನ ನಡೆಸಿದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ. ...