ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬೋಳಿಯಾರು ಗ್ರಾಮದ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ, ಮೃತಪಟ್ಟ ದುರ್ದೈವಿ. ಸಜೀಪ ಮುನ್ನೂರು ಗ್ರಾಮದ ಮೂಸಬ್ಬ ಎಂಬವರ ತ...