ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಈಗಾಗಲೇ ಹಲವು ವಿವಾದಗಳಿಗೆ ಸುದ್ದಿಯಾಗಿದ್ದು, ಇದೀಗ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಗಂಭೀರವಾದ ಆರೋಪ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯ...