ಯುವಕನೋರ್ವ ಒಂದೇ ಮಂಟಪದಲ್ಲಿ ಅವಳಿ ಸಹೋದರಿಯರನ್ನು ವಿವಾಹವಾದ ಘಟನೆ ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದಿದ್ದು, ಈ ವಿವಾಹದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ವರನಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಾಲೂಕಿನ ಅಕ್ಲುಜ್ ನಲ್ಲಿ ಈ ವಿಲಕ್ಷಣ ಘಟನೆ ನಡೆದಿದ್ದು, ವೃತ್ತಿಯಲ್ಲಿ ಐಟಿ ಇಂಜಿನಿಯರ್ ಆಗಿರುವ ಪಿಂ...