ಸಮುದ್ರ ವಿಹಾರಕ್ಕೆಂದು ಹೋಗಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ಯುವಕರನ್ನು ಹಿಂಬಾಲಿಸಿದ ತಂಡವೊಂದು ದಾಳಿ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಖಾಸಗಿ ವಿದ್ಯಾ ಸಂಸ್ಥೆಗೆ ಸೇರಿದ ಕೇರಳ ಮೂಲದ ವಿದ್ಯಾರ್ಥಿಗಳು ವ...