ಟಿಪ್ಪು ಸುಲ್ತಾನ್ ಕಾಲದ ದೀವಟಿಗೆ ಸಲಾಂ ಪೂಜೆ ಪದ್ಧತಿಯನ್ನು ನಿಲ್ಲಿಸುವಂತೆ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸುತ್ತೋಲೆ ಹೊರಡಿಸಿದೆ. ಟಿಪ್ಪು ರಾಜನಾಗಿದ್ದ ಕಾಲದಿಂದಲೂ ರಾಜ್ಯದ ಹಲವು ಪ್ರಸಿದ್ಧ ದೇವಾಲಯಗಳಲ್ಲಿ ದೀವಟಿಗೆ ಸಲಾಂ ಪೂಜೆ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಪುತ್ತೂರು ಮಹಾಲಿಂಗೇಶ್...