ಕಡಬ: ಗುಡ್ಡವೊಂದರಲ್ಲಿ ಗುಂಡಿ ತೆಗೆಯುವ ವೇಳೆ ಗುಹೆಯೊಂದು ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ. ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವವರ ಜಮೀನಿನಲ್ಲಿ ಈ ಪ್ರಾಚೀನ ಪರಿಕರಗಳು ಪತ್ತೆಯಾಗಿವೆ. ...