ಉಡುಪಿ: ನೀರು ಸೇದುತ್ತಿದ್ದಾಗ ತಾಯಿಯ ಕೈಯಿಂದ ಆಯತಪ್ಪಿ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ನಡೆದಿದೆ. ಮೃತ ಮಗುವನ್ನು ಕೀರ್ತನಾ ಎಂದು ಗುರುತಿಸಲಾಗಿದೆ. ಮಗುವಿನ ತಾಯಿ ನಯನಾ ಕರ್ಕಡ ಅವರು ಮನೆ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಆ...