ತಿರುವನಂತಪುರಂ: ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಿದ ಪ್ರಕರಣ(Uthra murder case)ಕ್ಕೆ ಸಂಬಂಧಿಸಿದಂತೆ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಉತ್ತರ ಹತ್ಯೆ ಪ್ರಕರಣ ಪೊಲೀಸರ ನಿಷ್ಪಕ್ಷಪಾತ ತನಿಖೆಯ ಬಳಿಕ ಇದೀಗ ಅಪರಾಧಿಗೆ ಶಿಕ್ಷೆ ವಿಧಿಸಲಾಗಿದೆ. ಭಾರ...