ಬೆಂಗಳೂರು: ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ಹಿಂದುಳಿದ ಜಾತಿಗಳ ಪೈಕಿ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್...