ಮೂಡಿಗೆರೆ: ಬೆಥನಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬ ಬಾಲಕಿ ಹೃದಯಾಘಾತದಿಂದ ಅಕಾಲಿಕವಾಗಿ ನಿಧನ ಹೊಂದಿದ್ದು, ಈ ನೋವಿನ ನಡುವೆಯೂ ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಿ, ಸಾರ್ಥಕತೆ ಮೆರೆದಿದ್ದಾರೆ. ಬಾಲಕಿಯ ಪೋಷಕರು ಆಕೆಯ ಎರಡೂ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಹಾಸನದ ಮೆಡಿಕಲ್ ಕಾಲೇಜಿನ Eye Bank ವೈದ...