ಬೆಂಗಳೂರು: ಬಿಗ್ ಬಾಸ್ ಕನ್ನಡದ ಮೊದಲ OTT ಸೀಸನ್ ತನ್ನ ಮಹತ್ವದ ಪ್ರಯಾಣದ ಅಂತಿಮ ಹಂತದಲ್ಲಿದೆ. ರೋಮಾಂಚನಕಾರಿ ಫೈನಲ್ ವೀಕ್ಷಿಸಲು ಪ್ರೇಕ್ಷಕರು ಸಜ್ಜಾಗುತ್ತಿದ್ದಂತೆ, ಪ್ರದರ್ಶನದ ಈ ಮೊದಲಿನ ಕೆಲವು ಸ್ಪರ್ಧಿಗಳು ಈ ಕಾರ್ಯಕ್ರಮದ ಸಿಂಹಾವಲೋಕನ ಮಾಡಿದ್ದಾರೆ ಮತ್ತು ಒಟ್ಟಾರೆ ಪಯಣದ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡಿದ್ದಾರೆ ಹಾಗೂ ಯಾರ...
ಕನ್ನಡ ಕಿರುತೆರೆಯ ಖ್ಯಾತ ನಟ ಮಂಡ್ಯ ರವಿ ಅವರು ಕೆಲ ಕಾಲದ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದು, ಇವರ ನಿಧನಕ್ಕೆ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ರವಿ ಪ್ರಸಾದ್ ಎಂ. ಎಂಬ ಹೆಸರಿನ ಇವರು ತಮ್ಮ ವೃತ್ತಿ ಕ್ಷೇತ್ರದಲ್ಲಿ ಮಂಡ್ಯ ರವಿಯಾಗಿ ಖ್ಯಾತಿಯನ್ನು ಪಡೆದ...
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, 8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ. ...
ಖಾಸಗಿ ಬಸ್ಸಿನಿಂದ ಎಸೆಯಲ್ಪಟ್ಟು ಮೆದುಳು ನಿಷ್ಕ್ರಿಯಗೊಂಡಿದ್ದ ವಿದ್ಯಾರ್ಥಿಯ ಅಂಗಾಂಗ ದಾನ ಮಾಡಿ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ. ಹೌದು. ಮಂಗಳೂರಿನ ಉಳ್ಳಾಲದ ಮಾಸ್ತಿಕಟ್ಟೆ ನಿವಾಸಿ ಯಶ್ ರಾಜ್ ಎಂಬಾತ ಮಂಗಳೂರಿನ ಖಾಸಗಿ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಯಾಗಿದ್ದ. ಸೆಪ್ಟೆಂಬರ್ 7ರಂದು ಬಸ್ಸಿನಲ್ಲಿ ಕಾಲೇಜಿಗೆ ತೆರಳುತ್ತಿದ್...
ಕಾರ್ಕಳ: ತಾಲೂಕಿನ ನಲ್ಲೂರು ಗ್ರಾಮದ ಪರಪ್ಪಾಡಿ ಅಂಬೇಡ್ಕರ್ ಭವನದಲ್ಲಿ ಮಾತೃಶ್ರೀ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ನಲ್ಲೂರು ಇವರ ಆಶ್ರಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ.65 ಕ್ಕಿಂತ ಅಧಿಕ ಅಂಕಗಳಿಸಿದವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಆಟೋಟ ಸ್ಪರ್ಧ...
ಅಭಿವೃದ್ಧಿ ಹೆಸರಿನಲ್ಲಿ ಮಾಡುವ ಕಾಮಗಾರಿ ಹೆಚ್ಚಿನವು ಕಳಪೆಯಾಗಿರುತ್ತದೆ ಎಂಬ ಆರೋಪ ಇಂದು ನಿನ್ನೆಯದಲ್ಲ. ಇದಕ್ಕೆ ಸಾಕ್ಷಾತ್ ಉದಾಹರಣೆ ಸುರತ್ಕಲ್ ಬಳಿ ನಿರ್ಮಾಣಗೊಂಡಿರುವ ಅಂಡರ್ ಪಾಸ್. ಮಂಗಳೂರು ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ವಿದ್ಯಾದಾಯಿನಿ ಶಾಲೆ ಬಳಿ ರಸ್ತೆ ಸಂಚಾರಕ್ಕೆ ಅನುಕೂಲಕರವಾಗಲೆಂದು ರಾಷ್ಟ್ರೀಯ ಹೆದ್...
ಕಾಪು : ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆಯನ್ನು ಖಂಡಿಸಿ ಬುಧವಾರ ಕಾಪು ಪೇಟೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ನೇತ್ರತ್ವದಲ್ಲಿ ಹಿಂದಿ ದಿವಸ್ ವಿರೋಧಿ ದಿನ ಪ್ರತಿಭಟನೆ ನಡೆಯಿತು. ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿ ವಿವಿಧತೆಯಲ್ಲಿ ಏಕತೆಯನ್ನು ಪ್ರದರ್ಶಿಸುತ್ತಿರುವ ನಮ್ಮ ದೇಶದಲ್ಲಿ ಆಯಾ ಪ್ರ...
ಮಂಗಳೂರು: 25 ವರ್ಷಗಳ ಹಿಂದೆ ನಡೆದಿದ್ದ ಕಾರು ಕಳವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದಲ್ಲಿ ಸುಮಾರು 25 ವರ್ಷ ಹಿಂದೆ ಅಂಬಾಸಿಡರ್ ಕಾರು ಕಳವು ಪ್ರಕರಣ ನಡೆದಿತ್ತು. ಈ ಕೇಸಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪಿರಿಯಾಪಟ್ಟಣದ ಆರೆನಹಳ್ಳಿ ನಿವಾಸಿ ಅಸ್ಲಾಂ ಯಾನೆ ಅಸ್ಲಾಂ ಪಾ...
ಜಾಗದ ವಿಚಾರವಾಗಿ ಅಣ್ಣನನ್ನು ತಮ್ಮನೇ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದ್ದು, ಹಲವು ಸಮಯಗಳಿಂದ ಇದ್ದ ಜಾಗದ ತಕರಾರು ಕೊಲೆಯಲ್ಲಿ ಅಂತ್ಯವಾಗಿದೆ. ವಿಟ್ಲ ಸಮೀಪದ ಕೊಡಂಗೆ ಎಂಬಲ್ಲಿ ಈ ಘಟನೆ ನಡೆದಿದ್ದು, ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಕೊಲೆಯಾದವರು. ಅವರ ತಮ್ಮ ಪದ್ಮನಾಭ (49) ಕೊಲೆ ಆರೋಪಿ. ಅಣ್...
ಪುಣೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ದಂತ ವೈದ್ಯೆಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ನಗರದ ವೆಲೆನ್ಸಿಯ ನಿವಾಸಿ ಜಿಶಾ ಜೋನ್ ಎಂದು ಗುರುತಿಸಲಾಗಿದೆ. ಜಿಶಾ ಜೋನ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಮೃತರು ಪತಿ, ತಂದೆ-ತಾಯಿ, ಸಹೋದರರ ಸಹಿತ ಅಪಾರ ಬಂಧ...