ಕುಕ್ಕರ್, ಐರನ್ ಬಾಕ್ಸ್ ಹಂಚಿ ಸಿದ್ದರಾಮಯ್ಯ ಚುನಾವಣೆಯಲ್ಲಿ ಗೆಲುವು: ಯತೀಂದ್ರ ಹೇಳಿಕೆ ಗಂಭೀರವಾಗಿ ಪರಿಗಣಿಸಿ: ಬಸವರಾಜ ಬೊಮ್ಮಾಯಿ - Mahanayaka
2:02 PM Saturday 25 - October 2025

ಕುಕ್ಕರ್, ಐರನ್ ಬಾಕ್ಸ್ ಹಂಚಿ ಸಿದ್ದರಾಮಯ್ಯ ಚುನಾವಣೆಯಲ್ಲಿ ಗೆಲುವು: ಯತೀಂದ್ರ ಹೇಳಿಕೆ ಗಂಭೀರವಾಗಿ ಪರಿಗಣಿಸಿ: ಬಸವರಾಜ ಬೊಮ್ಮಾಯಿ

basavaraj bommai
19/09/2023

ಬೆಂಗಳೂರು: 2023 ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ ಅವರು ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ  ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಆಗ್ರಹಿಸಿದ್ದಾರೆ.

ಮತದಾರರಿಗೆ ಕುಕ್ಕರ್, ಐರನ್ ವಾಕ್ಸ್  ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಯತಿಂದ್ರ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿಯವರು, ಈ ಕುರಿತು ಯತೀಂದ್ರ ಅವರು ಹೇಳಿದ್ದು ನಿಜವಾಗಿದ್ದರೆ, ಅದನ್ನು ಚುಬಾವಣಾ ಆಯೋಗ ಗಮನಿಸಬೇಕಾಗುತ್ತದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ  ಇದೆ. ಡಾ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಇದನ್ನು ಪರಿಗಣಿಸಬೇಕಾಗುತ್ತದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.

ಇತ್ತೀಚಿನ ಸುದ್ದಿ