ರಾಜಕೀಯ ಪಕ್ಷ ಘೋಷಿಸಿದ ತಮಿಳಿನ ಖ್ಯಾತ ನಟ: ವಿಜಯ್ ಪಾಲಿಟಿಕಲ್ ಎಂಟ್ರಿ ಹಿಂದೆ ಇದೆ ಆ ಸೂಪರ್ ಪ್ಲ್ಯಾನ್..! - Mahanayaka
10:42 AM Friday 12 - December 2025

ರಾಜಕೀಯ ಪಕ್ಷ ಘೋಷಿಸಿದ ತಮಿಳಿನ ಖ್ಯಾತ ನಟ: ವಿಜಯ್ ಪಾಲಿಟಿಕಲ್ ಎಂಟ್ರಿ ಹಿಂದೆ ಇದೆ ಆ ಸೂಪರ್ ಪ್ಲ್ಯಾನ್..!

02/02/2024

ತಮಿಳು ನಟ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಅವರ ನೂತನ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ ಎಂದು ಹೆಸರನ್ನು ಘೋಷಿಸಿದ್ದಾರೆ. ವಿಜಯ್ ರಾಜಕೀಯ ಪಕ್ಷ ಘೋಷಣೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಸಿನಿಮಾ ರಂಗದಿಂದ ರಾಜಕೀಯ ಪ್ರವೇಶಿಸಿದ ಎಂಜಿ ರಾಮಚಂದ್ರನ್ ಮತ್ತು ಜೆ.ಜಯಲಲಿತಾ ಸೇರಿದಂತೆ ಪ್ರಮುಖರ ಪಟ್ಟಿಗೆ ಸೇರಿದ್ದಾರೆ.

ತಮ್ಮ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಮುಂಬರುವ 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ. ಟಿವಿಕೆ ಯಾವ ಬಣವನ್ನೂ ಬೆಂಬಲಿಸುವುದಿಲ್ಲ ಎಂದು ವಿಜಯ್ ತಿಳಿಸಿದ್ದಾರೆ.
“ನಾನು ಈಗಾಗಲೇ ಒಪ್ಪಿಕೊಂಡಿರುವ ಚಿತ್ರಗಳನ್ನು ಪಕ್ಷದ ಕೆಲಸಗಳಿಗೆ ಧಕ್ಕೆಯಾಗದಂತೆ ಪೂರ್ಣಗೊಳಿಸಲು ನಿರ್ಧರಿಸಿದ್ದೇನೆ ಮತ್ತು ಸಾರ್ವಜನಿಕ ಸೇವೆಯ ರಾಜಕೀಯದಲ್ಲಿ ನನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತೇನೆ. ಇದು ತಮಿಳುನಾಡಿನ ಜನರಿಗೆ ನನ್ನ ಕೃತಜ್ಞತೆ ಎಂದು ನಾನು ಪರಿಗಣಿಸುತ್ತೇನೆ” ಎಂದು ವಿಜಯ್ ಹೇಳಿದ್ದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ತಮಿಳು ಚಿತ್ರರಂಗದ ಮುಂದಿನ ರಜನಿಕಾಂತ್ ಎನಿಸಿಕೊಂಡಿರುವ ವಿಜಯ್, ಇದುವರೆಗೆ 68 ಚಿತ್ರಗಳಲ್ಲಿ ನಟಿಸಿದ್ದಾರೆ. ನಟನೆ ಮಾತ್ರವಲ್ಲದೆ ಉಚಿತ ಆಹಾರ, ವಿದ್ಯಾರ್ಥಿ ವೇತನ ವಿತರಣೆ, ಗ್ರಂಥಾಲಯ, ಸಂಜೆ ಕಾಲೇಜು ಆರಂಭ, ಕಾನೂನು ಸಹಾಯ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ವಿಜಯ್ ತಮ್ಮ ಅಭಿಮಾನಿ ಸಂಘಗಳ ಮೂಲಕ ಮಾಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ