ಲಾಭಕ್ಕಾಗಿ ತಮಿಳು ಚಲನಚಿತ್ರಗಳನ್ನು ಹಿಂದಿಗೆ ಡಬ್ ಮಾಡುತ್ತಾರೆ: ಪವನ್‌ ಕಲ್ಯಾಣ್ ಟೀಕೆ - Mahanayaka
2:01 PM Saturday 18 - October 2025

ಲಾಭಕ್ಕಾಗಿ ತಮಿಳು ಚಲನಚಿತ್ರಗಳನ್ನು ಹಿಂದಿಗೆ ಡಬ್ ಮಾಡುತ್ತಾರೆ: ಪವನ್‌ ಕಲ್ಯಾಣ್ ಟೀಕೆ

15/03/2025

ತಮಿಳುನಾಡು ಸರ್ಕಾರ ಹಿಂದಿ ಹೇರಿಕೆಯನ್ನು ವಿರೋಧಿಸುತ್ತಾ ಬಂದಿದೆ. ಕೇಂದ್ರ ಸರ್ಕಾರವು ತ್ರಿಭಾಷಾ ನೀತಿಯ ಮೂಲಕ ಹಿಂದಿ ಹೇರುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆರೋಪಿಸಿದ್ದರು. ಈ ಬಗ್ಗೆ ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮಾತನಾಡಿ, ನಾಯಕರು ಹಿಂದಿಯನ್ನು ವಿರೋಧಿಸುತ್ತಾರೆ. ಆದರೆ, ಲಾಭಕ್ಕಾಗಿ ತಮಿಳು ಚಲನಚಿತ್ರಗಳನ್ನು ಹಿಂದಿಗೆ ಡಬ್ ಮಾಡುತ್ತಾರೆ ಎಂದು ಟೀಕೆ ಮಾಡಿದ್ದಾರೆ.


Provided by

ಕಾಕಿನಾಡಿನ ಪಿತಾಂಪುರಂನಲ್ಲಿ ನಡೆದ ಜನಸೇನಾ ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ಕೆಲವರು ಸಂಸ್ಕೃತ, ಹಿಂದಿಯನ್ನು ಏಕೆ ಟೀಕಿಸುತ್ತಾರೆ ಗೊತ್ತಿಲ್ಲ.

ಆರ್ಥಿಕ ಲಾಭಕ್ಕಾಗಿ ತಮ್ಮ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವ ತಮಿಳುನಾಡಿನ ರಾಜಕಾರಣಿಗಳು ಹಿಂದಿ ಭಾಷೆಯನ್ನು ಏಕೆ ವಿರೋಧಿಸುತ್ತಾರೆ? ಅವರು ಬಾಲಿವುಡ್‌ನಿಂದ ಹಣ ಮಾಡಲು ಬಯಸುತ್ತಾರೆ. ಆದರೆ, ಹಿಂದಿಯನ್ನು ಸ್ವೀಕರಿಸಲು ನಿರಾಕರಿಸುತ್ತಾರೆ, ಇದು ಯಾವ ರೀತಿಯ ತರ್ಕ’ ಎಂದು ಪ್ರಶ್ನೆ ಮಾಡಿದ್ದಾರೆ.

‘ತಮಿಳು ಸೇರಿದಂತೆ ಭಾರತಕ್ಕೆ ಎಲ್ಲಾ ಭಾಷೆಗಳು ಬೇಕು. ಯಾವುದೋ ಎರಡು ಭಾಷೆ ಮಾತ್ರ ಸಾಕಾಗಲ್ಲ. ನಾವು ಭಾಷಾ ವೈವಿಧ್ಯತೆಯನ್ನು ಆಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ