ಕಾರು—ಲಾರಿ ನಡುವೆ ಭೀಕರ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು

15/10/2023
ಚೆನ್ನೈ: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕಾರು ಮತ್ತು ಲಾರಿ ಚಾಲಕರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರ ಗುರುತುಪತ್ತೆ ಇನ್ನೂ ಆಗಿಲ್ಲ. ಗುರುತು ಪತ್ತೆಯ ಬಳಿಕ ಮೃತದೇಹಗಳನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.