ವಿವಿಧ ಬೆಳೆ ಬೆಲೆ ಏರಿಕೆ ಖಂಡಿಸಿ ತಲೆಬುರುಡೆ, ಮೂಳೆ ಧರಿಸಿ ರೈತರ ಪ್ರತಿಭಟನೆ

ಬೆಳೆ ಬೆಲೆ ಮತ್ತು ನದಿಗಳ ಜೋಡಣೆ ವಿಷಯದ ಬಗ್ಗೆ ತಮಿಳುನಾಡಿನ ಸುಮಾರು 200 ರೈತರು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆಗಳು ಮತ್ತು ಮೂಳೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಕೃಷಿಯಲ್ಲಿ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ್ದರೂ, ಬೆಳೆಗಳ ಬೆಲೆಯನ್ನು ಹೆಚ್ಚಿಸಿಲ್ಲ ಎಂದು ರೈತರು ಆರೋಪಿಸಿದ್ದಾರೆ.
2019 ರ ಚುನಾವಣೆಯ ಸಮಯದಲ್ಲಿ ಬೆಳೆಗಳ ಲಾಭವನ್ನು ದ್ವಿಗುಣಗೊಳಿಸುವುದಾಗಿ ಮತ್ತು ನದಿಗಳನ್ನು ಪರಸ್ಪರ ಸಂಪರ್ಕಿಸುವುದಾಗಿ ಪ್ರಧಾನಿ ಘೋಷಿಸಿದ್ದರು ಎಂದು ರಾಷ್ಟ್ರೀಯ ದಕ್ಷಿಣ ಭಾರತೀಯ ನದಿ ಜೋಡಣೆ ರೈತರ ಸಂಘದ ಅಧ್ಯಕ್ಷ ಅಯ್ಯಕಣ್ಣು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.
ಸರ್ಕಾರವು ತಮ್ಮ ಬೇಡಿಕೆಗಳನ್ನು ಆಲಿಸದಿದ್ದರೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವಾರಣಾಸಿಗೆ ಹೋಗುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.
ಸರ್ಕಾರ ನಮ್ಮ ಮಾತನ್ನು ಕೇಳದಿದ್ದರೆ, ನಾವು ವಾರಣಾಸಿಗೆ ಹೋಗಿ ಪ್ರಧಾನಿ ಮೋದಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ” ಎಂದು ರೈತರು ಹೇಳಿದ್ದಾರೆ. “ನಾವು ಪ್ರಧಾನಿಯ ವಿರುದ್ಧವಾಗಿಲ್ಲ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ನಮಗೆ ಅವರ ಸಹಾಯ ಬೇಕು” ಎಂದು ಅಯ್ಯಕಣ್ಣು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth